alex Certify BIG NEWS: ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ; 64,527 ಜನರು ಡಿಸ್ಚಾರ್ಜ್; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ; 64,527 ಜನರು ಡಿಸ್ಚಾರ್ಜ್; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…?

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 51,667 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,01,34,445ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 1,329 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,93,310 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 6,12,868 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 2,91,28,267 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 64,527 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 17,35,781 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ 39,95,68,448 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 30,79,48,744 ಜನರಿಗೆ ಲಸಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...