ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರೈತರನ್ನು ತುಳಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳದೇ ನನ್ನನ್ನು ಬಂಧಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಲಖಿಂಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎರಡು ವಾಹನಗಳು ರೈತರ ಮೇಲೆ ಹರಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಪ್ರಧಾನಿ ಮೋದಿಯವರಿಗೆ ಟ್ಯಾಗ್ ಮಾಡಿರುವ ಪ್ರಿಯಾಂಕಾ ಗಾಂಧಿ, ನಿಮ್ಮ ಸರ್ಕಾರ ಕಳೆದ 28 ಗಂಟೆಗಳಿಂದ ನನ್ನನ್ನು ಯಾವುದೇ ಆದೇಶ, ಎಫ್ ಐ ಆರ್ ಇಲ್ಲದೇ ಕಸ್ಟಡಿಯಲ್ಲಿಟ್ಟಿದೆ. ಆದರೆ ಅನ್ನದಾತನನ್ನು ತುಳಿದ ಈ ವ್ಯಕ್ತಿಯನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬೆರಗಾಗಿಸುತ್ತೆ ಕಳ್ಳತನದಿಂದಲೇ ಕೋಟ್ಯಾಧೀಶನಾದವನ ಐಷಾರಾಮಿ ಜೀವನ…!
ಲಖಿಂಪುರ ಹಿಂಸಾಚಾರ ಪ್ರಕರಣದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದ ಉತ್ತರಪ್ರದೇಶ ಪೊಲೀಸರು, ಗೃಹ ಬಂಧನದಲ್ಲಿರಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.