alex Certify BIG NEWS: ಕಳ್ಳತನಕ್ಕೆ ಬಂದವನ ಮೇಲೆ ಮನೆ ಮಾಲೀಕನಿಂದ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳ್ಳತನಕ್ಕೆ ಬಂದವನ ಮೇಲೆ ಮನೆ ಮಾಲೀಕನಿಂದ ಫೈರಿಂಗ್

ಬೆಂಗಳೂರು: ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆ ಮಾಲೀಕ ಕಳ್ಳನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕಳ್ಳ ಗುಂಡೇಟಿನಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆ ಮೂಲದ ಲಕ್ಷ್ಮಣ ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...