ಸಿಂದಗಿ: ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಯಾರು ತಾನು ಕಳ್ಳ ಆತ ಬೇರೆಯವರನ್ನು ನಂಬಲ್ಲ. ಹಾಗೇ ವಿನಾಕಾರಣ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಸಿಂದಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ನಾಯಕರು ಹಣ ಹಂಚುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾರು ಹಣ ಕೊಡುತ್ತಿದ್ದಾರೆ ? ಎಲ್ಲಿ ಹಂಚುತ್ತಿದ್ದಾರೆ ಎಂಬುದನ್ನು ಸಾಬೀತು ಮಾಡಲಿ. ಸೋಲಿನ ಭೀತಿಯಿಂದ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬರೋಬ್ಬರಿ 19 ತಿಂಗಳ ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಭೌತಿಕ ವಿಚಾರಣೆ ಆರಂಭ; ಕಲಾಪದಲ್ಲಿ ಭಾಗವಹಿಸಲು ಪತ್ರಕರ್ತರಿಗೂ ಅವಕಾಶ
ಡಿ.ಕೆ. ಶಿವಕುಮಾರ್ ಅವರನ್ನು ಒಂದು ಮಾತು ಕೇಳಲು ಬಯಸುತ್ತೇನೆ. 26 ರಾಜ್ಯಗಳಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅಲ್ಲೆಲ್ಲ ಹಣ ಬಲದಿಂದಲೇ ಅಧಿಕಾರಕ್ಕೆ ಬಂದಿದ್ದೇವಾ ? ಅಥವಾ ಕಾಂಗ್ರೆಸ್ ಬಳಿ ಹಣವಿಲ್ಲವೇ ? ಇಲ್ಲಾ ನಿಮ್ಮ ಬಳಿ ಹಣ ಕಡಿಮೆ ಇದೆಯೇ ? ಹಣ ಹಂಚಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದು ಎಂಬುದು ಸುಳ್ಳು ಎಂದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲುವುದು ಖಚಿತವಾಗಿದೆ. ಹಾಗಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಿನಾ ಕಾರಣ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.