alex Certify BIG NEWS: ಕಸದಿಂದಲೂ ಕೋಟಿ ಕೋಟಿ ಲೂಟಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು; ಡಿ.ಕೆ.ಶಿ ಬೇನಾಮಿ ವ್ಯವಹಾರದ ಎಕ್ಸ್ ಪರ್ಟ್; ಬಡ ಮಕ್ಕಳ ಹಾಸಿಗೆ, ದಿಂಬು ಖರೀದಿಯಲ್ಲಿಯೂ ಹಣ ಕಬಳಿಸಿದ ಕಾಂಗ್ರೆಸ್; ಬಿಜೆಪಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಸದಿಂದಲೂ ಕೋಟಿ ಕೋಟಿ ಲೂಟಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು; ಡಿ.ಕೆ.ಶಿ ಬೇನಾಮಿ ವ್ಯವಹಾರದ ಎಕ್ಸ್ ಪರ್ಟ್; ಬಡ ಮಕ್ಕಳ ಹಾಸಿಗೆ, ದಿಂಬು ಖರೀದಿಯಲ್ಲಿಯೂ ಹಣ ಕಬಳಿಸಿದ ಕಾಂಗ್ರೆಸ್; ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ರಾಜ್ಯ ಬಿಜೆಪಿ ಘಟಕ ಸರಣಿ ಪೋಸ್ಟರ್ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ಮೇಲಿನ ಜವಾಬ್ದಾರಿ ಎಷ್ಟಿತ್ತು ಎಂಬುದನ್ನು ಅವರ ಕಾಲದಲ್ಲಿ ನಡೆದ ವಿವಿಧ ಬಹುಕೋಟಿ ರೂ. ಹಗರಣಗಳು ಸ್ಪಷ್ಟಪಡಿಸುತ್ತವೆ. ಪುನರ್‌ಪರಿಶೀಲನೆ ಮಾಡಿ ಎಂದು ಕೋರ್ಟ್‌ ಹೇಳಿದ ರೀಡೂವನ್ನೇ ಹಿಡಿದು ಅರ್ಕಾವತಿ ಅಕ್ರಮ ಡೀನೋಟಿಫಿಕೇಶನ್‌ನಲ್ಲಿ ಸಾವಿರಕ್ಕೂ ಹೆಚ್ಚು ಕೋಟಿ ರೂ. ಹಗರಣ ನಡೆಸಿದಿರು ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಕಸದಿಂದಲೂ ಕೋಟಿ ಕೋಟಿ ಲೂಟಿ ಮಾಡಿದ ಕೀರ್ತಿ ಸಮಾಜವಾದಿ ಕಾಂಗ್ರೆಸ್ಸಿಗ ಸಿದ್ದರಾಮಯ್ಯನವರದ್ದು. 2015-16ರಲ್ಲಿ ಕಸ ವಿಲೇವಾರಿಗೆ ಮಾಡಿದ್ದ 385 ಕೋಟಿ ರೂ. 2016-17ಕ್ಕೆ ಆಗುವಾಗ 1066 ಕೋಟಿ ರೂ. ಆದದ್ದು ತಮ್ಮ ಹಾಗೂ ಕೆ.ಜೆ. ಜಾರ್ಜ್‌ ಕೈ ಚಳಕದ ಪರಿಣಾಮವಲ್ಲದೆ ಮತ್ತೇನು? ಎಂದು ಪ್ರಶ್ನಿಸಿದೆ.

ಕಾಲ ಕಳೆದಂತೆ ಜನ ಹಳೆಯ ವಿಚಾರಗಳನ್ನು ಮರೆಯುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಭಾವಿಸಿದ್ದಾರೆ. ತಾನು ವ್ಯವಹಾರವೇ ನಡೆಸಬಾರದಾ ಎಂದು ಮುಗ್ದ ವ್ಯಾಪಾರಿಯಂತೆ ಪ್ರಶ್ನಿಸುವ ಅವರು 2017ರಲ್ಲಿ ದೆಹಲಿಯ ಅವರ ನಿವಾಸದಲ್ಲಿ 8.86 ಕೋಟಿ ರೂ.ನಷ್ಟು ನಗದು ನಳನಳಿಸುತ್ತಿದ್ದುದು ಹೇಗೆ ಎಂದು ಇನ್ನೂ ತಿಳಿಸಿಲ್ಲ. ಸೌರ ವಿದ್ಯುತ್‌ ಹೆಸರಲ್ಲಿ ಡಿ.ಕೆ.ಶಿವಕುಮಾರ್ ತಂತ್ರಜ್ಞಾನವನ್ನೇ ಮೀರಿಸುವಂತೆ ಭ್ರಷ್ಟಾಚಾರ ನಡೆಸಿದ್ದರು. ಸದಾ ಸರ್ವರ್‌ ಬಿಜಿ಼ ಇರಿಸಿ ತಮಗೆ ಬೇಕಾದ ಆಯ್ದ ವ್ಯಕ್ತಿಗಳ ಜತೆ ವ್ಯವಹಾರ ಕುದುರಿಸಿದ ಮೇಲೆ ಏಳೇ ನಿಮಿಷಗಳಲ್ಲಿ ಕೋಟ್ಯಂಟರ ರೂ. ಟೆಂಡರ್‌ ಪ್ರಕ್ರಿಯೆ ಮುಗಿಸಿದ ಕೀರ್ತಿ ಅವರದ್ದು ಎಂದು ಆರೋಪಿಸಿದೆ.

ಆ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತಾಯಿ ಹಾಗೂ ಸಹೋದರನ ಹೆಸರಲ್ಲೂ ಟೆಂಡರ್‌ ಮಾಡಿಸಿದ ಡಿ.ಕೆ.ಶಿವಕುಮಾರ್ ಬೇನಾಮಿ ವ್ಯವಹಾರದ ಎಕ್ಸ್‌ಪರ್ಟ್‌. ಈಗಲೂ ತಾವು ಇಡಿ ಕರೆದಾಗ ಪಿಕ್ನಿಕ್‌ ರೀತಿ ಹೋಗಿ ಮಾಧ್ಯಮಗಳ ಮುಂದೆ ಅವಲತ್ತುಕೊಳ್ಳುತ್ತಾರೆಯೇ ವಿನಃ ಆರೋಪ ಅಲ್ಲಗಳೆಯುವ ಯಾವುದೇ ಸಾಕ್ಷ್ಯ ಒದಗಿಸಿಲ್ಲ ಎಂದು ವಾಗ್ದಾಳಿ ನಡೆಸಿದೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನಡೆಸುವ ಹಾಸ್ಟೆಲ್‌ಗಳಿಗೆ ಹಾಸಿಗೆ-ದಿಂಬು ಖರೀದಿಯಲ್ಲೂ ಸಿದ್ದರಾಮಯ್ಯ ಸರ್ಕಾರ ನೋಡಿದ್ದು ಹಣ ಕಬಳಿಸುವ ದಾರಿಯನ್ನೇ. 14 ಕೋಟಿ ರೂ. ಆ ರೀತಿ ನುಂಗಿದರೆ ಆಹಾರ ಪೂರೈಕೆ ಗುತ್ತಿಗೆಗೆ ಎಚ್.‌ ಆಂಜನೇಯ ಪತ್ನಿ 7 ಲಕ್ಷ ರೂ. ಲಂಚಕ್ಕೆ ಕೈ ಒಡ್ಡಿ ವೀಡಿಯೋ ಸಹಿತ ಸಿಕ್ಕುಬಿದ್ದರು. ಇವು ಕೇವಲ ಸ್ಯಾಂಪಲ್‌ಗಳು. ಇಂಥ ಘನಂದಾರಿ ಕೆಲಸ ಮಾಡಿದ ಕಾಂಗ್ರೆಸ್ ಇವತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದೆ. ಯಾವ ನೈತಿಕತೆಯೂ ಉಳಿದಿಲ್ಲದ ಕೈ ನಾಯಕರು ಆಡುವ ಮಾತಿಗೆ ಆಧಾರಗಳೂ ಕೊಡುತ್ತಿಲ್ಲ. ಸುಳ್ಳನ್ನೇ ನೂರು ಬಾರಿ ಗಟ್ಟಿಯಾಗಿ ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸುವ ಹಳೇ ಸೂತ್ರದಲ್ಲೇ ಇದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...