ಬೆಂಗಳೂರು: ಕಸ ವಿಲೇವಾರಿ ಟೆಂಡರ್ ನಲ್ಲಿ 222.29 ಕೋಟಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ 7 ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.
ಕಸ ವಿಲೇವಾರಿ ಟೆಂಡರ್ ನಲ್ಲಿ ಗೋಲ್ ಮಾಲ್ ಪ್ರಕರಣ ಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ 7 ಅಧಿಕಾರಿಗಳಿಗೆ ನೋಟೀಸ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು, 15 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದ್ದಾರೆ.
ಬಿಬಿಎಂಪಿಯ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಾಕೇಶ್ ಸಿಂಗ್, ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತ ಹರೀಶ್ ನಾಯಕ್, ಘನತ್ಯಾಜ್ಯ ನಿರ್ವಹಣೆಯ ಅಧೀಕ್ಷಕ ಎಂಜಿನಿಯರ್ ಬಸವರಾಜ್ ಪಿ ಕಬಾಡ, ಎಂಜಿನಿಯರ್ ಗಳಾದ ಪ್ರವೀಣ್ ಲಿಂಗಯ್ಯ, ಹೆಚ್.ಎಸ್. ಮೇಘಾ, ಮಧು ರಾಮಕೃಷ್ಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನೋಟೀಸ್ ನೀಡಲಾಗಿದೆ.