alex Certify BIG NEWS: ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್‌ ಶಾಸಕರಿಗೆ ಸಿದ್ದರಾಮಯ್ಯ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್‌ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ರಾಜ್ಯಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಮಧ್ಯೆ ಗೆಲುವಿಗಾಗಿ ಇತರೆ ಪಕ್ಷಗಳ ಶಾಸಕರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಕಸರತ್ತು ನಡೆಸುತ್ತಿವೆ.

ಇದರ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ ಶಾಸಕರಿಗೆ ಪತ್ರ ಬರೆದಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಖಾನ್‌ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ತಮ್ಮ ಪತ್ರದಲ್ಲಿ ಸಿದ್ದರಾಮಯ್ಯ ಜಾತ್ಯಾತೀತ ದಾಳ ಉರುಳಿಸಿದ್ದು, ದೇಶ ಪ್ರಸಕ್ತ ಸಂಕ್ರಮಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಜಾತ್ಯಾತೀತ ನಿಲುವು ಹೊಂದಿರುವ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿದ್ದಾರೆ.

ಇನ್ನು ಜೆಡಿಎಸ್‌ ನ ಕೆಲ ಅತೃಪ್ತ ಶಾಸಕರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ನಾಳಿನ ರಾಜ್ಯಸಭಾ ಚುನಾವಣೆ ಬಳಿಕ ಈ ಕುರಿತ ಸ್ಪಷ್ಟ ಚಿತ್ರಣ ಸಿಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...