ನವದೆಹಲಿ: ಐದು ರಾಜ್ಯಗಳ ಚುನಾವಣೆ ಸೋಲಿನ ಪರಾಮರ್ಶೆಗಾಗಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸೋಲಿನ ಪರಾಮರ್ಶೆಗಿಂತ ನಾಯಕತ್ವ ಬದಲಾವಣೆಯೇ ಪ್ರಮುಖವಾಗಿ ಚರ್ಚೆಯಾಗಿದೆ.
ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷರಾಗಲು ಅನೇಕ ನಾಯಕರು ಒತ್ತಡ ಹಾಕಿದ್ದಾರೆ. ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ ಜಿ -23 ನಾಯಕರು ಮುಕುಲ್ ವಾಸ್ನಿಕ್ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಅನೇಕರು ಗಾಂಧಿ ಕುಟುಂಬದ ನೇತೃತ್ವದಲ್ಲಿ ಒಗ್ಗಟ್ಟಾಗಿ ಪಕ್ಷವನ್ನು ಮುನ್ನಡೆಸಬೇಕೆಂದು ಹೇಳಿದ್ದು, ಸುದೀರ್ಘ ಚರ್ಚೆಯ ನಂತರ ಸೋನಿಯಾ ಗಾಂಧಿ ಅವರು ಅಧ್ಯಕ್ಷರಾಗಿ ಮುಂದುವರೆಸಲು ನಿರ್ಣಯ ಕೈಗೊಳ್ಳಲಾಗಿದೆ.
ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾಗಾಂಧಿಯವರೇ ಪಕ್ಷವನ್ನು ಮುನ್ನಡೆಸುತ್ತಾರೆ. ನಾವು ಅವರ ನಾಯಕತ್ವದಲ್ಲಿ ಸಂಪೂರ್ಣವಾಗಿ ನಂಬಿಕೆ ಇಟ್ಟಿದ್ದೇವೆ ಎಂದು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.