ನವದೆಹಲಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧಪಡಿಸಿದೆ. ಇಂದೇ 2ನೇ ಪಟ್ಟಿ ಬಿಡುಗಡೆಯಾಗಲಿದೆ.
ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಯಾಗಲಿದೆ. ಸಭೆಯಲ್ಲಿ 40 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗಿದೆ. ಕೆಲ ಹೊತ್ತಲೇ ಬಿಡುಗಡೆ ಮಾಡಲಾಗುವುದು ಎಂದರು.
ಇನ್ನುಳಿದ ಕ್ಷೇತ್ರಗಳಿಗೂ ಶೀಘ್ರದಲ್ಲಿಯೇ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದರು.