BIG NEWS: ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ

ಬೆಂಗಳೂರು: ಸಂಸದೆ ಸುಮಲತಾ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಬಿಜೆಪಿ ಅಭ್ಯರ್ಥಿ ಸುಧಾ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಸಂಸದೆ ಸುಮಲತಾ, ಪ್ರಚಾರ ಭಾಷಣದ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಷಮೆ ಕೇಳಿದರು.

ನನ್ನ ನಡೆಯಿಂದ ಕಾಂಗ್ರೆಸ್ ನವರಿಗೆ ಬೇಸರವಾಗಿದ್ದರೆ ಕ್ಷಮೆ ಇರಲಿ. ಅಂಬರೀಷ್ ಅವರು 27 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದರು. ಅಂಬರೀಶ್ ನಿಧನ ಬಳಿಕ ಕಾಂಗ್ರೆಸ್ ನಲ್ಲಿ ನನಗೆ ಅವಕಾಶ ಸಿಗಲಿಲ್ಲ. ಹಾಗಾಗಿ ಪಕ್ಷೇತರಳಾಗಿ ನಿಲ್ಲಬೇಕಾಯ್ತು. ಆಗ ನನ್ನ ಗೆಲುವಿಗಾಗಿ ಬಿಜೆಪಿ, ಕಾಂಗ್ರೆಸ್, ರೈತ ಸಂಘದ ಕಾರ್ಯಕರ್ಯರು ಶ್ರಮಿಸಿದರು. ಆಗ ನನ್ನ ಗೆಲುವಿಗಾಗಿ ಕಾಂಗ್ರೆಸ್, ಬಿಜೆಪಿ ಮಾತ್ರವಲ್ಲ ರೈತ ಸಂಘದವರು ಕಾರಣರಾಗಿದ್ದಾರೆ. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಬೆಂಬಲಿಸುವ ತೀರ್ಮಾನ ಕೈಗೊಳ್ಳಬೇಕಾಯ್ತು ಇದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದೆ ಎಂಬುದು ಗೊತ್ತು. ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೇನೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read