ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟಿರುವ ಕ್ರಮವನ್ನು ಖಂಡಿಸಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್, ಇದು ಸಂಘರ್ಷಕ್ಕೆ ದಾರಿ ಮಾಡಿಕೊಡಲಿದೆ ಎಂದು ಎಚ್ಚರಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಸಮತಾ ಸೈನಿಕ ದಳ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಣೆಗೂ ಅವಕಾಶ ನೀಡುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಅಭಿಮಾನಿಗಳು ಪಾಲಿಕೆ ಆವರಣದಲ್ಲಿಯೇ ಓವೈಸಿ ಪರ ಘೋಷಣೆಗಳನ್ನು ಕೂಗಿದ್ದಾರೆ. ಇದೆಲ್ಲ ಕಾಂಗ್ರೆಸ್ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಸ್ಲಾಂ ನಲ್ಲಿ ಅಲ್ಲಾ ಬಿಟ್ಟರೆ ಬೇರೆ ಯಾರನ್ನೂ ಪೂಜಿಸುವಂತೆ ಇಲ್ಲ. ಮುಸ್ಲಿಂರಲ್ಲೇ ಟಿಪ್ಪು ಜಯಂತಿಗೆ ಯಾರೂ ಒಪ್ಪಲ್ಲ. ಆದರೆ ಕಾಂಗ್ರೆಸ್ ಕುಮ್ಮಕ್ಕಿನಿಂದ ಟಿಪ್ಪು ಜಯಂತಿ ಮಾಡುತ್ತಿದ್ದಾರೆ. ಟಿಪ್ಪು ಜಯಂತಿಗೆ ನಾವು ಬಿಡುವುದಿಲ್ಲ. ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನೂ ಅಲ್ಲ, ಮೈಸೂರು ಹುಲಿಯೂ ಅಲ್ಲ. ಆತನಿಗೆ ಕರ್ನಾಟಕದಲ್ಲಿ ಗೌರವ ಕೊಡುವ ಅಗತ್ಯವಿಲ್ಲ ಆತ ಕನ್ನಡ ವಿರೋಧಿ. ಅಂತವನಿಗೆ ಜಯಂತಿ ಬೇಡ ಎಂದು ಹೇಳಿದರು.