ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಹಿಂದೆಯೇ ನಿವೃತ್ತಿಯಾಗುವುದಾಗಿ ಹೇಳಿದ್ದರು, 70ನೇ ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಇನ್ನೂ ನಿವೃತ್ತಿಯಾಗಿಲ್ಲ ಎಂದರೆ ಅಧಿಕಾರದ ದಾಹ ಅವರಿಗೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯನವರಿಗೆ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. 200 ಯುನಿಟ್ ಉಚಿತ ವಿದ್ಯುತ್ ಎಂದು ಸುಳ್ಳು ಹೇಳುತ್ತಿದ್ದಾರೆ. ಬರಿ ಸಾಲದ ಹೊರೆ ಕೊಡುವವರು ಸಿದ್ದರಾಮಯ್ಯ. ಮತ್ತೆ ಅಧಿಕಾರಕ್ಕೆ ಬರಬೇಕು ಎಂಬ ಅವರ ಪ್ರಯತ್ನ ಯಶಸ್ವಿಯಾಗಲ್ಲ ಎಂದು ಹೇಳಿದರು.
ಕಾಂಗ್ರೆಸ್ ನವರು ಖಾಲಿಯಾಗಿದ್ದಾರೆ. ಅವರಿಗೆ ಹೇಳಲು ಏನೂ ಇಲ್ಲ, ಅದಕ್ಕಾಗಿ ಸುಮ್ಮನೆ ಮಾತನಾಡುತ್ತಿದ್ದಾರೆ. ನಮ್ಮದು ಅಭಿವೃದ್ಧಿ ಪರ ಸರ್ಕಾರ ಅದಕ್ಕೆ ಜನ ನಮ್ಮನ್ನು ಬೆಂಬಲಿಸುತ್ತಾರೆ ಎಂದು ಹೇಳಿದರು.