ತುಮಕೂರು: ಕಾಂಗ್ರೆಸ್ ಹಿರಿಯ ನಾಯಕ ಎಂ.ಡಿ ಲಕ್ಷ್ಮೀನಾರಾಯಣ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂ.ಡಿ.ಲಕ್ಷ್ಮೀನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರ ರವಾನಿಸಿರುವುದಾಗಿ ತಿಳಿಸಿದರು.
ಪಕ್ಷದಲ್ಲಿನ ಇತ್ತೀಚಿನ ನಡೆಯಿಂದ ಬೇಸರವಾಗಿದ್ದು ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದಾಗಿ ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.