alex Certify BIG NEWS: ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ; BSY ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ; BSY ವಾಗ್ದಾಳಿ

ಮೈಸೂರು: ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದು, ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಜರಂಗದಳ ಬ್ಯಾನ್ ಅನ್ನೋದು ಕಾಂಗ್ರೆಸ್ ನ ತಿರುಕನ ಕನಸು. ಅಧಿಕಾರಕ್ಕೆ ಬಾರದವರು ಏನುಬೇಕಾದರೂ ಭರವಸೆ ನೀಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ಬಜರಂಗದಳ ನಿಷೇಧವಾಗಲ್ಲ. ಕಾಂಗ್ರೆಸ್ ಪ್ರಣಾಳಿಕೆಗೆ ಕವಡೆಕಾಸಿನ ಕಿಮ್ಮತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...