alex Certify BIG NEWS: ಕಾಂಗ್ರೆಸ್ ಗ್ಯಾರಂಟಿ ಕುರಿತು ಮೋದಿ ಹತಾಶ ಹೇಳಿಕೆ; ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗ್ಯಾರಂಟಿ ಕುರಿತು ಮೋದಿ ಹತಾಶ ಹೇಳಿಕೆ; ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಗುರುವಾರದಂದು ಬಿಜೆಪಿಯ 50 ಲಕ್ಷ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನವರು ನೀಡುತ್ತಿರುವ ಗ್ಯಾರಂಟಿ ಕುರಿತು ವ್ಯಂಗ್ಯವಾಡಿದ್ದರು.

ಕಾಂಗ್ರೆಸ್ ಗ್ಯಾರಂಟಿ ಎಂದರೆ ಅದು ಭ್ರಷ್ಟಾಚಾರ, ಕಾಂಗ್ರೆಸ್ ಗ್ಯಾರಂಟಿ ಎಂದರೆ ಅದು ಸುಳ್ಳು ಆಶ್ವಾಸನೆ ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಇದಕ್ಕೆ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲುವ ಹತಾಶೆಯಿಂದ ಮೋದಿ ಇಂತಹ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಹದಿನೈದು ಲಕ್ಷ ನೀಡುತ್ತೇನೆ ಎಂದಿದ್ದರು ಎಲ್ಲಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಬಿಜೆಪಿ ಆಡಳಿತ ನಡೆಸಿದ್ದು ಎಷ್ಟು ಭ್ರಷ್ಟಾಚಾರ ನಡೆದಿದೆ ಎಂಬುದು ಪ್ರಧಾನಿಗೆ ತಿಳಿದಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...