ಮಂಡ್ಯ: ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದೆ. ಹಲವು ಸಮುದಾಯಗಳಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಮತ್ತೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.
ಮಂಡ್ಯದ ವಿವಿ ಮೈದಾನದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಬೇಕು. ಪ್ರಧಾನಿ ಮೋದಿ ನೇತೃತ್ವದಲ್ಲಿ ಕರ್ನಾಟಕ ಅಭಿವೃದ್ಧಿಯಾಗುತ್ತಿದೆ. 2019ರಲ್ಲಿ ಮೋದಿ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂತು. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದೀರಿ. ಮುಂದಿನ ದಿನಗಳಲ್ಲಿಯೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದರು.
ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಭ್ರಷ್ಟಾಚಾರ ನಡೆಸಿವೆ. ಈ ಮೂಲಕ ಕರ್ನಾಟಕ ಅಭಿವೃದ್ಧಿಗೆ ತಡೆ ನೀಡಿವೆ. ಕಾಂಗ್ರೆಸ್, ಜೆಡಿಎಸ್ ನಲ್ಲಿ ಜಾತಿವಾದಿ, ಭ್ರಷ್ಟಾಚಾರಿಗಳು ಇದ್ದಾರೆ. ಅನೇಕ ಕ್ರಿಮಿನಲ್ಸ್ ಗಳು ಇದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿ ಹೈಕಮಾಂಡ್ ಗೆ ಎಟಿಎಂ ಆಗುತ್ತೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಒಂದು ಕುಟುಂಬಕ್ಕೆ ಎಟಿಎಂ ಆಗುತ್ತೆ. ಸಿದ್ದರಾಮಯ್ಯ ಸರ್ಕಾರ ಪಿ ಎಫ್ ಐ ವಿರುದ್ಧ ಕೇಸ್ ಗಳನ್ನು ವಾಪಸ್ ಪಡೆದಿತ್ತು. ಆದರೆ ಪಿ ಎಫ್ ಐ ಭಯೋತ್ಪಾಧಕ ಸಂಘಟನೆಯಾಗಿದ್ದರಿಂದ ಪ್ರಧಾನಿ ಮೋದಿ ಅವರು ಈ ಸಂಘಟನೆಯನ್ನೇ ನಿಷೇಧ ಮಾಡಿದ್ದಾರೆ ಎಂದರು.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಕೇದಾರನಾಥ, ಬದ್ರಿನಾಥ್ ಯಾತ್ರಾಸ್ಥಳ ಅಭಿವೃದ್ಧಿಯಾಗುತ್ತಿದೆ. ಮಂಡ್ಯದಲ್ಲಿ ಮೈಶುಗರ್ ಕಾರ್ಖಾನೆ ಪುನರಾರಂಭ ಮಾಡಿದ್ದೇವೆ. ಬೆಂಗಳೂರಿನಲ್ಲಿ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ವಿನಿಯೋಗ ಮಾಡಿದ್ದೇವೆ. ರಾಜ್ಯದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ದೇಶದ ಸುರಕ್ಷತೆಗೆ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.