ಕೋಲಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಮುಳಬಾಗಿಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಜಮೀನು ವ್ಯಾಜ್ಯ ಹಿನ್ನೆಲೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಹಿನ್ನೆಲೆಯಲ್ಲಿ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ಎಕರೆ ಜಮೀನು ಕ್ರಯ ಮಾಡಿಸಿಕೊಂಡು 2 ಎಕರೆ ಜಮೀನಿಗೆ ಬೇಲಿ ಹಾಕಿದ್ದಾರೆ. ಯಲಹಳ್ಳಿ ಗ್ರಾಮದಲ್ಲಿ 10 ಗುಂಟೆ ಜಾಗ ಅಕ್ರಮವೆಸಗಿದ್ದಾರೆ. ಇದನ್ನು ಪ್ರಶ್ನಿಸಿದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಂಬಲಿಗರಿಂದ ಧಮ್ಕಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಂಕ್ಷಿ ವಿರುದ್ಧ 504, 143, 149, 323, 354 ಅಡಿ ಪ್ರಕರಣ ದಾಖಲಾಗಿದೆ.