alex Certify BIG NEWS: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿರುದ್ಧ FIR ದಾಖಲು

ಕೋಲಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಮುಳಬಾಗಿಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಜಮೀನು ವ್ಯಾಜ್ಯ ಹಿನ್ನೆಲೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಹಿನ್ನೆಲೆಯಲ್ಲಿ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ಎಕರೆ ಜಮೀನು ಕ್ರಯ ಮಾಡಿಸಿಕೊಂಡು 2 ಎಕರೆ ಜಮೀನಿಗೆ ಬೇಲಿ ಹಾಕಿದ್ದಾರೆ. ಯಲಹಳ್ಳಿ ಗ್ರಾಮದಲ್ಲಿ 10 ಗುಂಟೆ ಜಾಗ ಅಕ್ರಮವೆಸಗಿದ್ದಾರೆ. ಇದನ್ನು ಪ್ರಶ್ನಿಸಿದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಂಬಲಿಗರಿಂದ ಧಮ್ಕಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಂಕ್ಷಿ ವಿರುದ್ಧ 504, 143, 149, 323, 354 ಅಡಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...