ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೇ ದಿನವಾಗಿದೆ. ಈ ನಡುವೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೆಪಿಸಿಸಿ ವಿಸ್ತರಿಸುವ ಸಾಧ್ಯತೆ ಇದೆ.
ಈವರೆಗೆ ಕಾಂಗ್ರೆಸ್ ಟಿಕೆಟ್ ಗಾಗಿ 400 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 30 ಶಾಸಕರೂ ಇದ್ದಾರೆ. ಹಲವು ಶಾಸಕರು ಹಾಗೂ ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಗೆ 5000 ಶುಲ್ಕ ನಿಗದಿ ಪಡಿಸಲಾಗಿದ್ದು,ಅರ್ಜಿಯೊಂದಿಗೆ 2 ಲಕ್ಷ ರೂಪಾಯಿ ಡಿಡಿ ನೀಡಬೇಕು ಎಂದು ಪಕ್ಷ ಷರತ್ತು ವಿಧಿಸಿದೆ.