alex Certify BIG NEWS: ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧ ತೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧ ತೆರವು

ಬೆಂಗಳೂರು: ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧವನ್ನು ತೆರವುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋದಲ್ಲಿ ಕೆ ಜಿ ಎಫ್ ಸಿನಿಮಾ ಹಾಡು ಬಳಸಿದ ಹಿನ್ನೆಲೆಯಲ್ಲಿ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಕಾಂಗ್ರೆಸ್ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಬೆಂಗಳೂರಿನ ವಾಣಿಜ್ಯ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ ಮೆಟ್ಟಿಲೇರಿತ್ತು.

ಕಾಂಗ್ರೆಸ್ ನ ಎಲ್ಲಾ ಸಾಮಾಜಿಕ ಜಾಲತಾಣಗಳಿಂದ ವಿಡಿಯೋ ಹಾಡಿನ ತುಣುಕನ್ನು ತೆಗೆದು ಹಾಕುವುದಾಗಿ ಕಾಂಗ್ರೆಸ್ ತಿಳಿಸಿತ್ತು. ಕಾಂಗ್ರೆಸ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧ ತೆರವು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...