alex Certify BIG NEWS: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ SMK ಸಹೋದರನ ಪುತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ SMK ಸಹೋದರನ ಪುತ್ರ

ಮಂಡ್ಯ ಜಿಲ್ಲೆ, ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಪುತ್ರ ಗುರು ಚರಣ್ ತಮಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದಿದ್ದಾರೆ.

ಗುರು ಚರಣ್ ತಮ್ಮ ಬೆಂಬಲಿಗರ ಜೊತೆ ಈಗ ಜೆಡಿಎಸ್ ಸೇರ್ಪಡೆಗೊಂಡಿದ್ದು, ಮದ್ದೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ನೀಡುವುದಾಗಿ ಮಾತು ಕೊಟ್ಟು ಡಿ.ಕೆ. ಶಿವಕುಮಾರ್ ನಮ್ಮ ಕುಟುಂಬಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ದುಡ್ಡು ಕೊಟ್ಟರೆ ಡಿ.ಕೆ. ಶಿವಕುಮಾರ್ ಟೆರರಿಸ್ಟ್ ಗೆ ಬೇಕಾದರೂ ಟಿಕೆಟ್ ನೀಡುತ್ತಾರೆ ಎಂದು ಆರೋಪಿಸಿದ ಗುರು ಚರಣ್, ಈ ಎಲ್ಲ ಕಾರಣಗಳಿಂದ ಬೇಸತ್ತು ಕಾಂಗ್ರೆಸ್ ತೊರೆದು ಬೇಷರತ್ತಾಗಿ ಜೆಡಿಎಸ್ ಸೇರ್ಪಡೆಯಾಗಿದ್ದೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...