
ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ದಿನಕ್ಕೊಂದು ಚರ್ಚೆಗೆ ಗ್ರಾಸವಾಗಿದೆ.
ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನನ್ನ ಪ್ರಕಾರ ಕಾಂಗ್ರೆಸ್ ನಲ್ಲಿ ನಾಲ್ವರು ಸಿಎಂ ರೇಸ್ ನಲ್ಲಿದ್ದಾರೆ ಎಂದರು.
ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ರೇಸ್ ನಲ್ಲಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಕೂಡ ಸಿಎಂ ರೇಸ್ ನಲ್ಲಿದ್ದಾರೆ ಎನಿಸುತ್ತಿದೆ ಎಂದು ಹೇಳಿದರು.