ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ. ಕೈ ಪಾಳಯದಲ್ಲಿ ಇದೀಗ ಮಹಿಳಾ ಸಿಎಂ ಕೂಗು ಆರಂಭವಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಕಾಂಗ್ರೆಸ್ ನಲ್ಲಿ ಮಹಿಳಾ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಮಹಿಳೆಯರು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಕಾಂಗ್ರೆಸ್ ನಲ್ಲಿ ಯಾಕೆ ಮಹಿಳೆಗೆ ಸಿಎಂ ಸ್ಥಾನ ಕೊಡಬಾರದು? ಅದಕ್ಕೆ ತಕ್ಕ ವಾತಾವರಣ ನಿರ್ಮಾಣ ಸೃಷ್ಟಿಯಾಗಬೇಕಿದೆ ಎಂದು ಹೇಳಿದರು.
ಟಿಕೆಟ್ ಹಂಚಿಕೆ ವೇಳೆ ಮಹಿಳೆಯರಿಗೆ ಆದ್ಯತೆ ಕೊಡಬೇಕು. ಇದನ್ನು ಈಗಾಗಲೇ ನಮ್ಮ ನಾಯಕರ ಗಮನಕ್ಕೂ ತರಲಾಗಿದೆ. ಮಹಿಳೆಯರಿಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದಲ್ಲಿಯೂ ಚರ್ಚೆ ನಡೆದಿದೆ. ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಚರ್ಚೆ ಕೂಡ ಇದೆ. ದಲಿತ ಸಿಎಂ ಕಾಂಗ್ರೆಸ್ ನಲ್ಲಿ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.