ಹಾವೇರಿ: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಸಿಎಂ ವಿರುದ್ಧ ಪೇಸಿಎಂ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಮೊದಲು ತಮ್ಮನ್ನು ನೋಡಿಕೊಳ್ಳಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಸಿಎಂ ಬೊಮ್ಮಾಯಿ ಮುಖ್ಯಮಂತ್ರಿಗಳಾದಾಗಿನಿಂದ ಕಾಂಗ್ರೆಸ್ ನಾಯಕರು ಬರಿ ಅಪಪ್ರಚಾರ ಮಾಡುತ್ತಿದ್ದಾರೆ. ಸಿಎಂ ಯಶಸ್ವಿಯಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. 15 ಗಂಟೆಗಳ ಕಾಲ ಕೆಲಸ ಮಾಡಿ ಜನಾನುರಾಗಿ ಸಿಎಂ ಎಂದು ಹೆಸರಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿದೆ. ಅದೇ ಕಾರಣಕ್ಕೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಗುಡುಗಿದರು.
ಸಿಎಂ ವಿರುದ್ಧ ಪೇಸಿಎಂ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ನವರು ತಾವು ಎಷ್ಟು ಸತ್ಯ ಹರಿಶ್ಚಂದ್ರರು ಎಂದು ನೋಡಿಕೊಳ್ಳಲಿ. ಕಾಂಗ್ರೆಸ್ ನವರ ಅವಧಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ಎಲ್ಲರಿಗೂ ಗೊತ್ತು ಎಂದು ಹೇಳಿದರು.