ಬೆಂಗಳೂರು: ಇತ್ತೀಚೆಗಷ್ಟೇ ಪ್ರಚೋದನಕಾರಿ ಭಾಷಣ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕೆಟ್ಟ ಪದಬಳಕೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಸಚಿವರ ಹೇಳಿಕೆಗಳಿಗೆ ಕಾಂಗ್ರೆಸ್ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ತಲೆ ಗಿರ್ರೆನ್ನಿಸುತ್ತೆ ಈ ಕ್ಷುದ್ರಗ್ರಹದ ನಂಬಲಸಾಧ್ಯವಾದ ಬೆಲೆ….!
ಸಚಿವರಾದವರಿಗೆ ಜವಾಬ್ದಾರಿ ಇರಬೇಕು, ಮಾತಿನ ಮೇಲೆ ಹಿಡಿತವಿರಬೇಕು. ಈಶ್ವರಪ್ಪನವರಿಗೆ ಸಂಸ್ಕೃತಿ, ಸಂಸ್ಕಾರವಿಲ್ಲ, ಸಂಸ್ಕಾರವಿರುವವರು ಅಂಥಹ ಪದ ಬಳಕೆ ಮಾಡುವುದಿಲ್ಲ, ಅವರು ಬೆಳೆದು ಬಂದ ಹಾದಿಯೇ ಅಂಥದ್ದು, ಇದು ಈಶ್ವರಪ್ಪನವರ ಸಂಸ್ಕೃತಿಯನ್ನು ತೋರುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಈಶ್ವರಪ್ಪ ಸಿಎಂ ಆಗಲು ಯತ್ನಿಸಿದ್ದರು. ಅದು ಸಾಧ್ಯವಾಗಿಲ್ಲ, ಡಿಸಿಎಂ ಆಗಲು ಪ್ರಯತ್ನಿಸಿದರು ಅದೂ ಕೂಡ ಸಾಧ್ಯವಾಗಲಿಲ್ಲ. ಹೀಗಾಗಿ ಅವರಿಗೆ ಹುಚ್ಚುಹಿಡಿದಿದೆ. ಮೊನ್ನೆಯಷ್ಟೇ ಪ್ರಚೋದನಕಾರಿ ಭಾಷಣ ಮಾಡಿದರು. ಈಗ ಅವಾಚ್ಯ ಶಬ್ದಗಳನ್ನು ಬಳಸುತ್ತಿದ್ದಾರೆ. ಈಶ್ವರಪ್ಪ ಅವರನ್ನು ನಿಮ್ಹಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.