ಬೆಂಗಳೂರು: ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
1 ಸ್ಟಾರ್ ರೇಟಿಂಗ್ ಕೊಟ್ಟ ಗ್ರಾಹಕಿಗೆ ಟ್ವಿಟರ್ನಲ್ಲೇ ಬಾರ್ ಮಾಲೀಕನ ಟಾಂಗ್…!
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ನಾಯಕರು ಇಂದಿನಿಂದ 5 ದಿನಗಳ ಕಾಲ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಕೆ ಎಸ್ ಆರ್ ಪಿ ಬಸ್ ನಲ್ಲಿ ಕರೆದೊಯ್ದಿದ್ದಾರೆ.
ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 28 ದಿನಗಳ ಬಳಿಕ ಸಿಗಲಿದೆ ಕೋವಿಶೀಲ್ಡ್ 2ನೇ ಡೋಸ್
ರಾಜ್ಯದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೈ ನಾಯಕರನ್ನು ವಶಕ್ಕೆ ಪಡೆದು, ಹೈಗ್ರೌಂಡ್ಸ್ ಠಾಣೆಯಲ್ಲಿ ಮುಚ್ಚಳಿಕೆ ಹಾಗೂ ವೈಯಕ್ತಿಕ ಮಾಹಿತಿ ಪಡೆದು ಬಿಡುಗಡೆಗೊಳಿಸಿದ್ದಾರೆ.