ಬೆಂಗಳೂರು: ಮೇಕೆದಾಟು ಪಾದಯಾತ್ರೆ ಮಾಡಿದ್ದಕ್ಕೆ ಯೋಜನೆಗೆ ಸರ್ಕಾರ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನವರಿಗೆ ವಿಧಾನಸೌಧದಲ್ಲೇ ಉತ್ತರ ಕೊಡುತ್ತೇನೆ ಎಂದಿದ್ದಾರೆ.
ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ನಾವು ಪಾದಯಾತ್ರೆ ಕೈಗೊಂಡಿದ್ದರಿಂದಲೇ ಬಜೆಟ್ ನಲ್ಲಿ ಯೋಜನೆಗೆ 1000 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಆರೋಪಕ್ಕೆ ಇಲ್ಲಲ್ಲ ವಿಧಾನಸೌಧದಲ್ಲೇ ಉತ್ತರ ಕೊಡುತ್ತೇನೆ ಎಂದರು.
BIG NEWS: ಗೂಂಡಾ ಮುಸ್ಲಿಂರ ಮಾನಸಿಕತೆ ಇನ್ನೂ ಕಡಿಮೆಯಾಗಿಲ್ಲ; ಮತ್ತೆ ಕಿಡಿಕಾರಿದ ಸಚಿವ ಈಶ್ವರಪ್ಪ
ಇದೇ ವೇಳೆ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಈಗಾಗಲೇ ಹಲವು ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ತ್ವರಿತವಾಗಿ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.