ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ.
ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಗಾಯತ್ರಿ ಶಾಂತೇಗೌಡ ಅವರ ಬೇಲೂರಿನ ಅಳಿಯನ ಮನೆ ಮೇಲೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಅಲ್ಲಿಯೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.