alex Certify BIG NEWS: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡಗೆ ಐಟಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡಗೆ ಐಟಿ ಶಾಕ್

Gayatri-Shantegowdaಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ.

ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಗಾಯತ್ರಿ ಶಾಂತೇಗೌಡ ಅವರ ಬೇಲೂರಿನ ಅಳಿಯನ ಮನೆ ಮೇಲೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಅಲ್ಲಿಯೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...