alex Certify BIG NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೆ ಕೊರೊನಾ ಸೋಂಕು

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಪ್ರಿಯಾಂಕಾ ಮಾಹಿತಿ ನೀಡಿದ್ದಾರೆ.

ನನಗೆ ಇಂದು ಮತ್ತೊಮ್ಮೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಜೂನ್ 3ರಂದು ಪ್ರಿಯಾಂಕಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಕೋವಿಡ್ ನ ಸೌಮ್ಯ ಲಕ್ಷಣಗಳು ಇದ್ದ ಕಾರಣ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಇದೀಗ ಅವರಲ್ಲಿ ಮತ್ತೊಮ್ಮೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ತಮ್ಮ ಜೊತೆ ಸಂಪರ್ಕಕ್ಕೆ ಬಂದವರು ತಕ್ಷಣ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...