ಚಿತ್ರದುರ್ಗ: ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪೇಸಿಎಂ ಅಭಿಯಾನ ಒಂದು ಡರ್ಟಿ ಪಾಲಿಟಿಕ್ಸ್ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪೇಸಿಎಂ ಅಭಿಯಾನ ಕಾಂಗ್ರೆಸ್ ನಾಯಕರ ನೈತಿಕ ಅಧ:ಪತನವನ್ನು ತೋರುತ್ತದೆ. ಕಾಂಗ್ರೆಸ್ ನ ಪೇಸಿಎಂ ಅಭಿಯಾನದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪೇಸಿಎಂ ಅಭಿಯಾನದಲ್ಲಿ ಭಾಗಿಯಾದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.