ಹುಬ್ಬಳ್ಳಿ: ಬಜೆಟ್ ಅಧಿವೇಶನಕ್ಕೆ ವಿಪಕ್ಷ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದು ಪ್ರತಿಭಟಿಸಿದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಚುನಾವಣೆಯ ವೇಳೆ ಕಾಲೆಳೆಯುವುದು ಹಕ್ಕು ಎಂದು ಅವರು ಭಾವಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಪಾರ್ಟಿ ಮೇಲೆ ಜನ ಹೂವಿಟ್ಟಿದ್ದಾರೆ. ಜನ ಇಟ್ಟಿರುವ ಹೂವಿಗೆ ಕಾಂಗ್ರೆಸ್ ನವರು ಎದ್ದುಬರಲಾಗದ ಸ್ಥಿತಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸ್ವಾತಂತ್ರ್ಯ ತಂದುಕೊಟ್ಟಿದ್ದು ನಾವೇ ಎಂದು ಜನರ ಕಿವಿ ಮೇಲೆ ಹೂ ಇಟ್ಟಿದ್ದರು. ಈಗ ಜನರೆ ಅವರ ಕಿವಿ ಮೇಲೆ ಹೂ ಇಟ್ಟು ಕಳುಹಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.