alex Certify BIG NEWS: ಕಾಂಗ್ರೆಸ್ ಪಕ್ಷವೇ ಒಂದು ಅಶ್ಲೀಲ; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಪಕ್ಷವೇ ಒಂದು ಅಶ್ಲೀಲ; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ

ತುಮಕೂರು: ಹಿಂದೂ ಪದ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸುತ್ತಿದೆ.

ಈ ನಡುವೆ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ಪಕ್ಷವೇ ಒಂದು ಅಶ್ಲೀಲ ಎಂದು ಕಿಡಿಕಾರಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸಬೇಕು. ಅವರ ಹೇಳಿಕೆ ಖಂಡನೀಯ. ಕಾಂಗ್ರೆಸ್ ಪಕ್ಷವೇ ಒಂದು ಅಶ್ಲೀಲ. ಅದು ಗೊತ್ತಾಗಿಯೇ ಜನರು ದೇಶದಿಂದಲೇ ಪಕ್ಷವನ್ನು ಹೊರ ಹಾಕಿದ್ದಾರೆ. ಈಗಾಗಲೇ ಕಾಂಗ್ರೆಸ್ ಸಾಕಷ್ಟು ಬೆಲೆ ತೆತ್ತಿದೆ. ಇನ್ನಷ್ಟು ಬೆಲೆ ತೆರುತ್ತದೆ ಎಂದು ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್ ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ. ತಾಕತ್ತಿದ್ದರೆ ಸತೀಶ್ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...