ಬೆಂಗಳೂರು: ಬಜೆಟ್ ವೇಳೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಅಧಿವೇಶನಕ್ಕೆ ಆಗಮಿಸುವ ಮೂಲಕ ಶಿಷ್ಟಾಚಾರ ಪಾಲಿಸದೇ ಅಗೌರವ ತೋರಿದ್ದಾರೆ ಎಂದು ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಪ್ರಚಾರಕ್ಕಾಗಿ ಕಾಂಗ್ರೆಸ್ ನವರು ಡ್ರಾಮಾ ಕಂಪನಿ ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷ ಡ್ರಾಮಾ ಕಂಪನಿ ಇದ್ದಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಫೆ.23ರಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಸಂಡೂರಿಗೆ ಭೇಟಿ ನೀಡಲಿದ್ದಾರೆ. ಸಂಡೂರಿನಲ್ಲಿ ಸಾರ್ವಜನಿಕ ಸಮಾವೇಶ ಹಾಗೂ ತೋರಣಗಲ್ ನಲ್ಲಿ ನಾಲ್ಕು ಜಿಲ್ಲೆ ಬಿಜೆಪಿ ಮುಖಂಡರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.