ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಸಾತನೂರು ಪೊಲೀಸ್ ಠಾಣೆಯಲ್ಲಿ 2ನೇ ಎಫ್ಐಆರ್ ದಾಖಲಾಗಿದ್ದು, ಕನಕಪುರ ತಹಶೀಲ್ದಾರ್ ದೂರು ಆಧರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 41 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಿ ಮೊನ್ನೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆಗೆ ಚಾಲನೆ ನೀಡಿದ್ದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ 30 ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಎರಡನೇ ಎಫ್ಐಆರ್ ದಾಖಲಾಗಿದೆ.