BIG NEWS: ಕಾಂಗ್ರೆಸ್ ಬಸ್ ಪಂಕ್ಚರ್ ಆಗಲಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ಪರಿವರ್ತನೆಗಳಾಗುತ್ತಿವೆ. ಕಾಂಗ್ರೆಸ್ ಆಡಳಿತವನ್ನು ಇಡೀ ದೇಶದ ಜನ ತಿರಸ್ಕರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, 5 ವರ್ಷದ ಹಿಂದೆ ಜನ ಕಾಂಗ್ರೆಸ್ ಹಾಗೂ ಜೆಡಿಎಸ್ ನ್ನು ತಿರಸ್ಕರಿಸಿದರು. ಈಗ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಮಾಡುತ್ತಿದ್ದಾರೆ. ಬಸ್ ಹೊರಟಿದೆ. ಆದರೆ ಅದು ಪಂಕ್ಚರ್ ಆಗಲಿದೆ ಎಂದು ವ್ಯಂಗ್ಯವಾಡಿದರು.

ಇನ್ನು ಜೆಡಿಎಸ್ ಪಂಚರತ್ನ ರಥ ಯಾತ್ರೆಯೂ ಅಷ್ಟೇ. ಪಂಚರತ್ನ ರಥಯಾತ್ರೆ ವಿಜಯಪುರ ತಲುಪುವಷ್ಟರಲ್ಲಿ ಇತ್ತ ಹಾಸನದಲ್ಲಿ ಪಂಕ್ಚರ್ ಮಾಡುವ ಕೆಲಸವಾಗಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಪಕ್ಷಗಳು ಸಂಪೂರ್ಣವಾಗಿ ನೆಲಕಚ್ಚಲಿದ್ದು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read