ಬೆಂಗಳೂರು: ಕಾಂಗ್ರೆಸ್ ಬಾಲಗ್ರಹ ಪೀಡಿತ ಪಕ್ಷವಾಗಿದೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಯಾರಾಗ್ತಾರೆ ನೋಡೋಣ. ಯಾರು ಸಿಎಂ ಆಗ್ತಾರೆ ಅನ್ನುವುದರ ಮೇಲೆ ನಾವು ಸ್ಟ್ರ್ಯಾಟಜಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಮಾಜಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸುಧಾಕರ್ ಅವರೇ ಹೇಳಬೇಕು ನನಗೆ ಗೊತ್ತಿಲ್ಲ ಎಂದು ಹೇಳಿದರು.