
ರಾಮನಗರ: ಕಾಂಗ್ರೆಸ್- ಬಿಜೆಪಿ ಹೊಂದಾಣಿಕೆ ರಾಜಕಾರಣ ಆರೋಪ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಈ ಹಿಂದೆ ಜೆಡಿಎಸ್, ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಬಿಜೆಪಿ ಜೊತೆ ಒಪ್ಪಂದದ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಅರ್ಕಾವತಿ ಹಗರಣದ ಬಗ್ಗೆ ಬಿಜೆಪಿ ಸರ್ಕಾರ ಯಾಕೆ ತನಿಖೆ ಮಾಡಿಲ್ಲ? ರಾಜ್ಯ ಲೂಟಿ ಮಾಡಿದವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.