ಬೆಂಗಳೂರು: ರಾಜ್ಯದಲ್ಲಿ ಸೆ.30ರಿಂದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೈ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಹತ್ವದ ಜವಾಬ್ದಾರಿ ನೀಡಿದ್ದಾರೆ.
ಕೇರಳದ ವೈನಾಡು ಮೂಲಕ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪಲಿರುವ ಭಾರತ್ ಜೋಡೋ ಯಾತ್ರೆ ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ 510 ಕೀ,ಮೀ ಪಾದಯಾತ್ರೆ ನಡೆಯಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.
ಕಾಂಗ್ರೆಸ್ ಜೋಡೋ ಯಾತ್ರೆಗಾಗಿ ಕೆಲ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಶಾಸಕರು, ಪರಿಷತ್ ಸದಸ್ಯರಿಗೆ, ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ರಣದೀಪ್ ಸುರ್ಜೆವಾಲಾ ಸೂಚನೆ ಮೇರೆಗೆ ಒಂದೊಂದು ದಿನದ ಪಾದಯಾತ್ರೆ ಜವಾಬ್ದಾರಿ ಒಂದೊಂದು ನಾಯಕರಿಗೆ ಡಿ.ಕೆ.ಶಿವಕುಮಾರ್ ವಹಿಸಿದ್ದಾರೆ. ಜನರನ್ನು ಸೇರಿಸುವುದು, ವಾಹನ ವ್ಯವಸ್ಥೆ, ಜಾಹೀರಾತು, ರಿಪ್ರೆಶ್ ಮೆಂಟ್, ಪಾದಯಾತ್ರೆ ಉಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿಯನ್ನು ಪರಿಷತ್ ಸದಸ್ಯರು, ಶಾಸಕರಿಗೆ ವಹಿಸಿದ್ದಾರೆ.