
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಕಾಂಗ್ರೆಸ್ ಭವನದಲ್ಲಿ ನಡೆದಿದೆ.
ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಕರೆಯಲಾಗಿತ್ತು. ಈ ವೇಳೆ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದು, ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಕಾಂಗ್ರೆಸ್ ಮುಖಂಡರ ಎರಡು ಬಣಗಳ ನಡುವೆ ವಾಗ್ವಾದ, ಗಲಾಟೆ ನಡೆದಿದೆ. ಶಿಡ್ಲಘಟ್ಟ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.