ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರಪ್ಪ ನಾಯ್ಡು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗುರಪ್ಪನಾಯ್ದು ಅವರ ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಗುರಪ್ಪ ನಾಯ್ಡು ಪದ್ಮನಾಭನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಐಟಿ ದಾಳಿ ನಡೆದಿದ್ದು, ಕೈ ಮುಖಂಡರಿಗೆ ಬಿಗ್ ಶಾಕ್ ಎದುರಾಗಿದೆ.