ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲ ರಾಜಕೀಯ ಮುಖಂಡರಿಂದ ಪಕ್ಷ ವಿರೋಧಿ ಚಟುವಟಿಕೆಯೂ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಉಚ್ಛಾಟನೆ ಮಾಡಿರುವ ಘಟನೆ ನಡೆದಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ತುಮಕೂರು ಜಿಲ್ಲೆಯ ಗುಬ್ಬಿ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಅವರನ್ನು ಉಚ್ಛಾಟನೆ ಮಾಡಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ಆದೇಶ ಹೊರಡಿಸಿದ್ದಾರೆ.
ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಕುಮಾರ್, ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ವಿರೋಧಿಸಿದ್ದರು. ತಾನೇ ಅಭ್ಯರ್ಥಿ ಎಂದು ಪ್ರಚಾರಕ್ಕೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.