ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಅವರನ್ನು ಬೆಳಗಾವಿ ಎಪಿಎಂಸಿ ಠಾಣೆ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಗೋವಿಂದ ಕಾರಜೋಳ ಅವರ ಎದುರು ಪ್ರತಿಭಟನೆ ನಡೆಸಲು ನವ್ಯಶ್ರಿ ಪ್ಲಾನ್ ಮಾಡಿದ್ದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆಯನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಪಿಎಂಸಿ ಠಾಣೆ ಪೊಲೀಸರು ನವ್ಯಶ್ರೀ ಅವರನ್ನು ಬೆಳಗಾವಿ ರಾಮದೇವ ಹೋಟೆಲ್ ಬಳಿ ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದಾರೆ.