ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪಕ್ಷದ ವಿರುದ್ಧವೇ ತಿರುಗಿಬಿದ್ದು ಕಾಂಗ್ರೆಸ್ ಸೋಲಿಸಲು ತಂತ್ರ ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಸೋಲಿಸಲು ಜಮೀರ್ ಅಹ್ಮದ್ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಜತೆ ಕೈಜೋಡಿಸಿದ್ದಾರೆ. ಇದೇ ಕಾರಣಕ್ಕೆ 500 ಕೋಟಿ ಪಡೆದುಕೊಂಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಶಾಸಕ ಜಮೀರ್ ಅಹ್ಮದ್ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರನ್ನು ಭೇಟಿಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಕೈಜೋಡಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಜಮೀರ್ ಅಹ್ಮದ್ ಅವರಿಗೆ ಬುಲಾವ್ ನೀಡಿ ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ ರೆಡ್ಡಿ ಹೇಳಿದ್ದಾರೆ.
ಶಾಸಕ ಜಮೀರ್ ಅಹ್ಮದ್ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಭೇಟಿ ಬಳಿಕ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕೆಸಿಆರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ನಂತರದಲ್ಲಿ ಬಿ ಆರ್ ಎಸ್ ಪಕ್ಷ ಜೆಡಿಎಸ್ ಗೆ ಸಂಪೂರ್ಣ ಬೆಂಬಲ ಘೋಷಿಸಿದೆ. ಈ ಮೂಲಕ ಜೆಡಿಎಸ್ ಅಧಿಕಾರಕ್ಕೆ ತರಲು ಜಮೀರ್ ಕೆಸಿಆರ್ ಜೊತೆ ಕೈಜೋಡಿಸಿರುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ತೆಲಂಗಾಣ ಕಾಂಗ್ರೆಸ್ ಮುಖಂಡರು ಹೊಸ ಬಾಂಬ್ ಸಿಡಿಸಿದ್ದಾರೆ. ಒಟ್ಟಾರೆ ಶಾಸಕ ಜಮೀರ್ ಅಹ್ಮದ್ ಹಾಗೂ ತೆಲಂಗಾಣ ಸಿಎಂ ಕೆಸಿಆರ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.