ಬೆಂಗಳೂರು: ಬಿಜೆಪಿ ಶಾಸಕರನ್ನು ಡಿ.ಕೆ.ಶಿವಕುಮಾರ್ ಸೆಳೆಯುವುದರಲ್ಲಿ ಅರ್ಥವಿಲ್ಲ, ನಮ್ಮ ಯಾವ ಶಾಸಕರೂ ಕಾಂಗ್ರೆಸ್ ಗೆ ಹೋಗಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ನಮ್ಮ ಯಾವ ಶಾಸಕರು ಕೂಡ ಪಕ್ಷ ಬಿಟ್ಟು ಹೋಗಲ್ಲ, ಕಾಂಗ್ರೆಸ್ ಶಾಸಕರೇ ನಮ್ಮ ಜೊತೆ ಬರಲಿದ್ದಾರೆ. ಅವರು ಯಾರು ಎಂದು ಕೆಲದಿನಗಳಲ್ಲೇ ಗೊತ್ತಾಗಲಿದೆ. ಬಿಜೆಪಿ ಶಾಸಕರನ್ನು ಕಾಂಗ್ರೆಸ್ ನತ್ತ ಸೆಳೆಯುವ ಡಿಕೆಶಿ ಯತ್ನ ವಿಫಲವಾಗಲಿದೆ ಎಂದು ಹೇಳಿದರು.
ನೀವೂ ನಿದ್ರೆಯಲ್ಲಿ ಗೊರಕೆ ಹೊಡೆಯುತ್ತೀರಾ…? ಹಾಗಾದ್ರೆ ತಿಳಿದಿರಿ ಈ ವಿಷಯ
ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಕೆಲ ಶಾಸಕರನ್ನು ಸಂಪರ್ಕಿಸಿ, ಕಾಂಗ್ರೆಸ್ ನತ್ತ ಸೆಳೆಯಲು ಯತ್ನಿಸಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ. ನಮ್ಮ ಯಾವೊಬ್ಬ ಶಾಸಕರು ಕಾಂಗ್ರೆಸ್ ನತ್ತ ಮುಖಮಾಡಲ್ಲ. ಅನಗತ್ಯವಾಗಿ ಡಿಕೆಶಿ ಪ್ರಯತ್ನಿಸುವುದು ಬೇಡ ಎಂದು ನಿನ್ನೆ ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಆಪರೇಷನ್ ಹಸ್ತ ಆರಂಭಿಸಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿತ್ತು. ಈ ನಡುವೆ ಇದೀಗ ಕಾಂಗ್ರೆಸ್ ನ ಕೆಲ ಶಾಸಕರೇ ಬಿಜೆಪಿಗೆ ಬರಲಿದ್ದಾರೆ ಎಂದು ಹೇಳುವ ಮೂಲಕ ಬಿಎಸ್ ವೈ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.