alex Certify BIG NEWS: ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ; ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ; ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ

ಕೋಲಾರ: ಕೋಲಾರದಲ್ಲಿ ನಡೆದಿದ್ದ ಕಾಂಗ್ರೆಸ್ ಸಭೆಯಲ್ಲಿ ಕೈ ಕಾರ್ಯಕರ್ತರ ಹೈ ಡ್ರಾಮಾ ನಡೆದಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಷಣದ ವೇಳೆ ಅಡ್ಡಿ ಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಪರ ಘೋಷಣೆ ಕೂಗಲು ಆರಂಭಿಸಿದ್ದಾರೆ.

ಈ ವೇಳೆ ಸುರ್ಜೇವಾಲಾ ಮುಜುಗರಕ್ಕೀಡಾಗಿದ್ದಾರೆ. ಸಭೆಯಲ್ಲಿ ಸುರ್ಜೇವಾಲಾ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ನಿಂತ ಕಾರ್ಯಕರ್ತರು ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಘೋಷಣೆ ಕೂಗಿದ್ದಾರೆ.

ಈ ವೇಳೆ ಎದ್ದುನಿಂತ ಸಿದ್ದರಾಮಯ್ಯ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ನಾನಿನ್ನೂ ತೀರ್ಮಾನ ಮಾಡಿಲ್ಲ ದಯವಿಟ್ಟು ಕುಳಿತುಕೊಳ್ಳುವಂತೆ ಸೂಚಿಸಿದ್ದಾರೆ. ಆದರೂ ಕಾರ್ಯಕರ್ತರು ಸಿದ್ದರಾಮಯ್ಯ, ಸಿದ್ದರಾಮಯ್ಯ ಎಂದು ಕೂಗಿದ್ದಾರೆ ಕೋಲಾರ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಹೈಡ್ರಾಮಾ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...