ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಸಿಗಲಿಲ್ಲವೆಂಬ ಕಾರಣಕ್ಕೆ ಸಿಡಿದೆದ್ದಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶುಕ್ರವಾರದಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್ ಮೊದಲಾದವರು ಲಕ್ಷ್ಮಣ ಸವದಿ ಅವರನ್ನು ಸ್ವಾಗತಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದು, ಇಂದು ಬೆಳಗಾವಿಗೆ ಎಂಟ್ರಿ ಕೊಟ್ಟಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅವರು ಬಂದಿಳಿಯುತ್ತಿದ್ದಂತೆ ಅಭಿಮಾನಿಗಳು ಘೋಷಣೆಗಳನ್ನು ಕೂಗಿ ಅದ್ದೂರಿ ಸ್ವಾಗತ ನೀಡಿದ್ದಾರೆ.