ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದು, ಸೋನಿಯಾ ಗಾಂಧಿ ಅವರಿಗೆ ಕೋವಿಡ್ ದೃಢಪಟ್ಟಿದೆ. ನಿನ್ನೆಯಿಂದ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್ ಟೆಸ್ಟ್ ಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. 3-4 ದಿನಗಳಲ್ಲಿ ಸೋನಿಯಾ ಗಾಂಧಿ ಚೇತರಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ನೀಡಿದೆ. ಇದರ ಬೆನ್ನಲ್ಲೇ ಸೋನಿಯಾ ಗಾಂಧಿಗೆ ಕೋವಿಡ್ ಸೋಂಕು ದೃಧಪಟ್ಟಿದೆ.