ಮೈಸೂರು: ರಾಜ್ಯಾದ್ಯಂತ ಪಿ ಎಫ್ ಐ ಸಂಘಟನೆ ಮುಖಂಡರ ಮೇಲೆ ಪೊಲೀಸರ ದಾಳಿ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿ ಎಫ್ ಐ ಸಂಘಟನೆ ಮೇಲೆ ದಾಳಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ ಚುನಾಯಿತ ಪ್ರತಿನಿಧಿಗಳ ಮೇಲೆ ಹಲ್ಲೆ, ಹತ್ಯೆಗೆ ಸಂಚು ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಪೂಜೆ ಮಾಡಬೇಕಾ? ಎಂದು ಗರಂ ಆದರು.
ಸಮಾಜ ವಿರೋಧಿ ಕೃತ್ಯದಲ್ಲಿ ಭಾಗಿಯಾಗಿದ್ದರೆ ಬಲಿ ಹಾಕಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಧಾರ್ಮಿಕ ಸಂಘರ್ಷಕ್ಕೆ ಕಾರಣರಾಗುವ ಬಗ್ಗೆ ಪ್ರಧಾನಿ ಮೋದಿ ಹತ್ಯೆಗೂ ಸಂಚು ರೂಪಿಸಿದ್ದಾರೆ ಎಂಬ ವರದಿಗಳಿವೆ. ಅವರು ಅಷ್ಟರ ಮಟ್ಟಿಗೆ ಸಮರ್ಥರಿದ್ದಾರಾ ಈ ನಿಟ್ಟಿನಲ್ಲಿ ತನಿಖೆಯಾಗಬೇಕಿದೆ. ತನಿಖೆ ಬಳಿಕ ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದರು.