ಕೊಡಗು: ಕಾಫಿ ಬೆಳೆಗಾರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದಾರೆ. ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ, ಕಾಫಿ ಬೆಳೆಗಾರರ 10 ಹೆಚ್ ಪಿ ವರೆಗಿನ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ.
ಹಳೆ ಬಾಕಿ ಪರಿಗಣಿಸದೆ ಉಚಿತ ವಿದ್ಯುತ್ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡಿದ್ದಾರೆ. ಇದೇ ವೇಳೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಒದಗಿಸಲಾಗುವುದು. ಇದರಿಂದ 8 ಲಕ್ಷ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ ಎಂದರು.